ಪುಣೆ: ಭಾರತದಲ್ಲಿ ಭರವಸೆ ಮೂಡಿಸಿರುವ ಕೊರೊನ ಲಸಿಕೆಯಾದ ಕೋವಿಶೀಲ್ಡ್ ಅನ್ನು ಅಭಿವೃದ್ಧಿ ಪಡಿಸುತ್ತಿರುವ ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದನೆ ಮಾಡುವ ಪುಣೆಯ ಸೀರಂ ಸಂಸ್ಥೆಯ ಒಂದನೇ ಗೇಟ್ನಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಇಂಗ್ಲೆಂಡಿನ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಜೆನಿಕಾ ಕಂಪನಿ ಅಭಿವೃದ್ಧಿ ಪಡಿಸಿದ್ದ ಕೋವಿಶೀಲ್ಡ್ ಲಸಿಕೆಯ ಉತ್ಪಾದನೆ ಸೀರಂ ಸಂಸ್ಥೆಯಲ್ಲಿ ನಡೆಯಿತಿತ್ತು. ಆಗೆ ಕೋವಿಶೀಲ್ಡ್ ಲಸಿಕೆಯನ್ನು ಶೇಖರಿಸಿಡಲಾಗಿತ್ತು.
ಈಗಾಗಲೇ 10 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಕೋವಿಶೀಲ್ಡ್ ಲಸಿಕೆಯನ್ನು ಸಂಗ್ರಹಿಟ್ಟ ಜಾಗದಲ್ಲಿ ಅಗ್ನಿ ಅವಘಡ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
6 ಗಂಟೆಯ ವರದಿಯ ಪ್ರಕಾರ : ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಕೆಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಪಡೆಯುತ್ತಿದ್ದಾರೆ.